ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ ನ್ಯಾಯ ಮಂಡಳಿ ಒಟ್ಟು 30 ಸಾವಿರ ರೂ. ದಂಡ ವಿಧಿಸಿದೆ.
ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಡಂಗೇರಿ ಗ್ರಾಮದ ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದುದನ್ನು ಠಾಣಾಧಿಕಾರಿ ಈ.ಮಂಜುನಾಥ್ ಪತ್ತೆಹಚ್ಚಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ವಿರಾಜಪೇಟೆ ಪ್ರಧಾನ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯವು ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಇದರೊಂದಿಗೆ ಬಾಲ ನ್ಯಾಯ ಮಂಡಳಿಯಿಂದ 5 ಸಾವಿರ ರೂ. ದಂಡ ವಿಧಿಸಲಾಗಿದ್ದು, ಒಟ್ಟು 30 ಸಾವಿರ ದಂಡವನ್ನು ಪೋಷಕರು ಪಾವತಿಸಿದ್ದಾರೆ ಎಂದು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…
ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…
ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…
ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…
ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…