ಮಡಿಕೇರಿ: ನಾಗರಹೊಳೆ ಅರಣ್ಯ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಿಂದ ಕಳೆದ ನಾಲ್ಕು ದಿನಗಳ ಹಿಂದೆ ತಪ್ಪಿಸಿಕೊಂಡ ಪಾರ್ಥ ಎಂಬ ಕಾಡಾನೆಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಮಡನೂರು ಬಳಿ ಸೆರೆಹಿಡಿದು ಶಿಬಿರಕ್ಕೆ ಕರೆತರಲಾಗಿದೆ.
ಕಳೆದ ಆರು ತಿಂಗಳ ಹಿಂದೆ ಹಾಸನ ಜಿಲ್ಲೆ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ಈ ಆನೆಯನ್ನು ಪಳಗಿಸಲಾಗಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಎಂದಿನಂತೆ ಕಾಡಿಗೆ ಬಿಟ್ಟಿದ್ದ ಆನೆ ತಪ್ಪಿಸಿಕೊಂಡಿತು. ಕಳೆದ ನಾಲ್ಕು ದಿನಗಳಿಂದ ಸತತವಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಅಧಿಕಾರಿಗಳು ತೀವ್ರ ಶೋಧ ನಡೆಸಿ ಇದೀಗ ಪತ್ತೆ ಹಚ್ಚಿದ್ದಾರೆ.