Mysore
19
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್‌ ಕಚೇರಿ ನಿರ್ಧಾರ ಮಾಡಿದೆ.

ಏಪ್ರಿಲ್.8ರಿಂದ ಮೂರು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ನಡೆಯಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದ ಯದುವೀರ್‌ ಒಡೆಯರ್‌ ಅವರು ಕೊಡಗು ಜಿಲ್ಲೆಯಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸುವಂತೆ ಮನವಿ ಮಾಡಿದ್ದರು.

ಇದಕ್ಕೆ ಸ್ಪಂದಿಸಿದ ಬೆಂಗಳೂರು ರೀಜನಲ್‌ ಪಾಸ್‌ಪೋರ್ಟ್‌ ಅಧಿಕಾರಿಗಳು ಸಂಸದರಿಗೆ ಪತ್ರ ಬರೆದಿದ್ದು, ಏಪ್ರಿಲ್‌ 8, 9, 10ರಂದು ಮೇಳ ಆಯೋಜಿಸಲಾಗುವುದು ಎಂದು ಹೇಳಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಂಸದ ಯದುವೀರ್‌ ಒಡೆಯರ್‌ ಅವರು, ಕೊಡಗು ಜಿಲ್ಲೆಯ ಹಲವಾರು ಮಂದಿ ಪಾಸ್‌ಪೋರ್ಟ್‌ ಬೇಕು ಎಂದು ಮನವಿ ಸಲ್ಲಿಸಿದ್ದರು. ಕೆಲವರು ಮೈಸೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕು. ಇದು ಹಿರಿಯ ನಾಗರಿಕರಿಗೆ ತೊಂದರೆ ಆಗುತ್ತದೆ ಎಂದು ಮನವಿಯಲ್ಲಿ ವಿವರಿಸಿದ್ದರು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ಹೇಳಿದರು.

 

Tags:
error: Content is protected !!