ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಹುಂಡಿ ಒಳಮಾಳ ಗ್ರಾಮದ ನಿವಾಸಿ ರತೀಫ್ (67) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ರತೀಫ್ ಅವರು ತೋಟದ ಕೆಲಸದಲ್ಲಿ ನಿರತರಾಗಿದ್ದ ವೇಳೆ ಅರಣ್ಯ ಪ್ರದೇಶದಿಂದ ಹೊರಬಂದ ಕಾಡಾನೆ ಹಠಾತ್ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಲ್ಲಿ ಅವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸ್ಥಳೀಯರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಿದ್ದಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆಗಳ ಓಡಾಟ ಹೆಚ್ಚಾಗಿದ್ದು, ತೋಟಗಳು ಮತ್ತು ಕೃಷಿ ಭೂಮಿಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವುದರ ಜೊತೆಗೆ ಜನರ ಜೀವಕ್ಕೆ ಅಪಾಯ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮೃತ ರತೀಫ್ ಅವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಕಾಡಾನೆಗಳ ಚಲನವಲನ ನಿಯಂತ್ರಿಸಲು ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕೊಡಗಿನಲ್ಲಿ ಕಾಡಾನೆ–ಮಾನವ ಸಂಘರ್ಷ ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಕಾಡಾನೆಗಳ ಚಲನವಲನದ ಮೇಲೆ ನಿಗಾ ವಹಿಸಿ ಜನರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚಾಗಿದೆ.
ಯಳಂದೂರು: ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಗುರುವಾರ…
ಬೆಂಗಳೂರು: ಪೆಟ್ರೋಲ್‌ನಲ್ಲಿ ಮಿತಿ ಮೀರಿದ ಎಥೆನಾಲ್ ಮಿಶ್ರಣದ ಆರೋಪಕ್ಕೆ ಸಂಬಂಧಿಸಿದಂತೆ ಪರೀಕ್ಷೆಗೆ ಕಳುಹಿಸಿದ್ದ 63 ಸ್ಯಾಂಪಲ್‌ಗಳ ಫಲಿತಾಂಶ ನೀಡಿಲ್ಲ ಎಂದು…
ಯಳಂದೂರು: ಚಾಮರಾಜನಗರ ಜಿಲ್ಲೆಯ ಪವಿತ್ರ ಯಾತ್ರಾ ಕ್ಷೇತ್ರ ಬಿಳಿಗಿರಿರಂಗನ ಬೆಟ್ಟದ ಶ್ರೀ ತಿರುವೆಂಗಳನಾಥ ಸ್ವಾಮಿ ದೇವಾಲಯಕ್ಕೂ ಯಳಂದೂರು ಮೂಲದ ವರದೇ…
ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಬಳಸುವುದಕ್ಕೆ ಕಡಿವಾಣ ಹಾಕಲು ಹೊಸ ಮೊಬೈಲ್ ಆ್ಯಪ್ ತರಲು ಯೋಜಿಸಲಾಗಿದೆ.…
ಮೈಸೂರು: ಬಾಳೆಗೊನೆ ಮೂಲಕ ಡ್ರಗ್ಸ್ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ…
ಬೆಂಗಳೂರು: ‘ಬಿಜೆಪಿಯವರು ರೀಲ್ಸ್ ರಾಜರು. ಬೆಂಗಳೂರಿಗೆ ಹೊಸ ಯೋಜನೆ ತಂದಿದ್ದಾರಾ?’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಮೆಟ್ರೋ ವಿಚಾರದಲ್ಲಿ…