ಕೊಡಗು

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಚೆಟ್ಟಳ್ಳಿಯ ಕೋಗಿಲಹಳ್ಳ ಎಸ್ಟೇಟ್‌ನಲ್ಲಿ ನಡೆದಿದೆ.

ಒರಿಸ್ಸಾ ಮೂಲದ ಅಶ್ವಿನಾಗೊಮಾಗೊ ಮೃತ ಕಾರ್ಮಿಕ. ಕಾರ್ಮಿಕ ಮಹೇಶ್ ಹತ್ಯೆಗೈದ ಆರೋಪಿ. ಮಾ.೨ರಂದು ಮಧ್ಯಾಹ್ನ ಸುಮಾರು ೧.೪೦ ಗಂಟೆಗೆ ಮಹೇಶ್, ಅಶ್ವಿನಾಗೊಮಾಗೊನನ್ನು ಅಂಗಡಿಗೆ ಹೋಗುವ ನೆಪದಲ್ಲಿ ಮನೆಯಿಂದ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಆದರೆ ನಂತರ ಮಹೇಶ್ ಒಬ್ಬನೇ ಮನೆಗೆ ವಾಪಸ್ಸಾಗಿದ್ದು, ಅಶ್ವಿನಾಗೊಮಾಗೊ ಮನೆಗೆ ಮರಳಿಲ್ಲ. ಸಂಜೆ ವೇಳೆಗೆ ಸಂಶಯಗೊಂಡ ಪತ್ನಿ ಹಾಗೂ ನೆರೆಹೊರೆಯವರು ಕಾಫಿ ತೋಟದಲ್ಲಿ ಹುಡುಕಾಟ ನಡೆಸಿದಾಗ, ತೋಟದ ಬೇಲಿಯ ಸಮೀಪ ಕಾಫಿ ಗಿಡದ ಕೆಳಗೆ ಮೃತದೇಹ ಪತ್ತೆಯಾಗಿದೆ.

ಮೃತದೇಹದ ಮುಖಭಾಗದಲ್ಲಿ ರಕ್ತಗಾಯಗಳು ಕಂಡು ಬಂದಿದ್ದು, ಹಳೆಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ವೈಯಕ್ತಿಕ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದ್ದುದಾಗಿ ತಿಳಿದುಬಂದಿದೆ. ಬಳಿಕ ಆರೋಪಿ ಮಹೇಶ್ ಚೆಟ್ಟಳ್ಳಿ ಠಾಣೆಗೆ ಬಂದು ನಾನೇ ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ.

ಈ ಕುರಿತು ಅಶ್ವಿನಾಗೊಮಾಗೊ ಪತ್ನಿ ಸುಂಭಾರಿಗಮಂಗೋ ಚೆಟ್ಟಳ್ಳಿ ಉಪಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ಮಹೇಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸ್ಥಳಕ್ಕೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಮಡಿಕೇರಿಯ ಡಿವೈಎಸ್ಪಿ ಸೂರಜ್, ಗ್ರಾಮಾಂತರ ಸಿಪಿಐ ಚಂದ್ರಶೇಖರ್, ಅಪರಾಧ ವಿಭಾಗದ ಸಿಬ್ಬಂದಿಗಳು, ಚೆಟ್ಟಳ್ಳಿ ಉಪ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

9 mins ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

33 mins ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

50 mins ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

55 mins ago

ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಬಳಿ ನಡೆದಿದೆ. ರಶ್ಮಿ…

1 hour ago

ಫೋನ್‌ ಕದ್ದಾಲಿಕೆ ಅವಶ್ಯಕತೆ ಏನಿದೆ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ

ರಾಮನಗರ: ಕಾಂಗ್ರೆಸ್‌ ಸರ್ಕಾರದಲ್ಲಿ ಫೋನ್‌ ಕದ್ದಾಲಿಕೆ ಇದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

1 hour ago