ಕೊಡಗು

ಹೃದಯಾಘಾತದಿಂದ ಪೊಲೀಸ್‌ ಪೇದೆ ಸಾವು

ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ.

ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್ (47) ಎಂಬವರೆ ಮೃತಪಟ್ಟವರು. ವಿಜಯ್ ಕಳೆದ ಹಲವು ವರ್ಷಗಳಿಂದ ಮಡಿಕೇರಿಯ ಡಿಎಆರ್‌ನಲ್ಲಿ ಮುಖ್ಯ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಜಯ್ ಪೊಲೀಸ್ ಬ್ಯಾಂಡ್ ಮನ್ ಆಗಿಯೂ ಕೆಲಸ ಮಾಡುತ್ತಿದ್ದರು. ಹಲವು ವರ್ಷಗಳಿಂದ ಮಡಿಕೇರಿ ಮೈತ್ರಿ ಹಾಲ್‌ನ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದರು.

ಬುಧವಾರ ರಾತ್ರಿ ವಿಜಯ್‌ಗೆ ಏಕಾಏಕಿ ಎದೆನೋವು ಕಾಣಿಕೊಂಡಿದೆ ಎನ್ನಲಾಗಿದ್ದು, ಪತ್ನಿಯ ಬಳಿ ಬಿಸಿನೀರು ಕೇಳಿ ಕುಡಿದಿದ್ದಾರೆ. ಬಳಿಕ ಮಲಗಿದ್ದವರು ಅಸ್ವಸ್ಥಗೊಂಡಿದ್ದರು ಎನ್ನಲಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಯಾವುದೇ ಪ್ರಯೋಜವಾಗಿಲ್ಲ.

ವಿಜಯ್ ಅವರ ಮೃತದೇಹವನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಶವಗಾರ ರವಾನಿಸಲಾಗಿತ್ತು. ಶವಗಾರಕ್ಕೆ ಕೊಡಗು ಎಸ್ಪಿ ರಾಮರಾಜನ್ ಸೇರಿದಂತೆ ಹಿರಿಯ ಅಧಿಕಾರಿಗಳು, ಸಿಂಬಂಧಿ ಆಸ್ಪತ್ರೆಗೆ ಆಗಮಿಸಿ ಸಂತಾಪ ಸೂಚಿಸಿದರು.

ವಿಜಯ್ ಮೃತದೇಹಕ್ಕೆ ಮಡಿಕೇರಿಯಲ್ಲಿ ಸರ್ಕಾರಿ ಗೌರವ ಸೂಚಿಸಿದ ಬಳಿಕ ಮಡಿಕೇರಿಯಿಂದ ಹುಟ್ಟೂರಿಗೆ ಕಳುಹಿಸಿಕೊಡಲಾಯಿತು. ಮೃತ ವಿಜಯ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

9 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

10 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

10 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

10 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

11 hours ago