ಮಡಿಕೇರಿ ನಗರದ ಕಾಲೇಜು ರಸ್ತೆಯ ಏಕಮುಖ ರಸ್ತೆಯಲ್ಲಿ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತಿದ್ದ ಮಹಿಳಾ ಸಹಾಯವಾಣಿ (ಪಿಂಕ್ ಗಸ್ತು ವಾಹನ )ಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ.
ವಾಹನ ಸಂಖ್ಯೆ KA02 G 1815 ವಾಹನ ಚಾಲಕ ಜಯಶಂಕರ್ ರಿಗೆ 500ರೂ ದಂಡ ವಿಧಿಸಲಾಗಿದೆ. ಸಂಚಾರಿ ಪೊಲೀಸ್ ರ ಕರ್ತವ್ಯ ನಿಷ್ಠೆಯನ್ನು ಗಮನಿಸಿದ ಸ್ಥಳೀಯರು ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.





