ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಲಕ್ಷ್ಮಣ ತೀರ್ಥ ನದಿಗೆ ನಿರ್ಮಿಸಲಾಗಿರುವ ಮಲ್ಲೂರು ಸೇತುವೆಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಲೋಕಾರ್ಪಣೆಗೊಳಿಸಿದರು.
9.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಎರಡು ಗ್ರಾಮಕ್ಕ ಸಂಪರ್ಕ ಸೇತುವೆಯಾಗಿದೆ. ಲೋಕಾರ್ಪಣೆ ಬಳಿಕ ಸಂಸದರು ಸೇತುವೆ ವೀಕ್ಷಿಸಿದರು. ಬಳಿಕ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ಮಾಜಿ ಶಾಸಕ ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





