Mysore
30
scattered clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ಪೊನ್ನಂಪೇಟೆ | ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ಹಳ್ಳಿಗಟ್ಟು ಸಿ.ಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ(19) ಮೃತ ವಿದ್ಯಾರ್ಥಿನಿ.

ಘಟನ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮೃತ ವಿದ್ಯಾರ್ಥಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಇಂದು ಕೂಡ ಹುಟ್ಟು ಹಬ್ಬದ ನಿಮಿತ್ತ, ಸ್ನೇಹಿತರಿಗೆ ಸಿಹಿ ಹಂಚಿ, ತರಗತಿ ಮುಗಿದ ಬಳಿಕ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ.

4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು. ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಆರು ವಿಷಯಗಳು ಬ್ಯಾಕ್ ಲಾಗ್ ಇರುವ ಕಾರಣ, ನನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಳು ಎಂದು ಹೇಳಲಾಗಿದೆ.

Tags:
error: Content is protected !!