ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ಹಳ್ಳಿಗಟ್ಟು ಸಿ.ಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ(19) ಮೃತ ವಿದ್ಯಾರ್ಥಿನಿ.
ಘಟನ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತ ವಿದ್ಯಾರ್ಥಿನಿ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಇಂದು ಕೂಡ ಹುಟ್ಟು ಹಬ್ಬದ ನಿಮಿತ್ತ, ಸ್ನೇಹಿತರಿಗೆ ಸಿಹಿ ಹಂಚಿ, ತರಗತಿ ಮುಗಿದ ಬಳಿಕ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು. ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಆರು ವಿಷಯಗಳು ಬ್ಯಾಕ್ ಲಾಗ್ ಇರುವ ಕಾರಣ, ನನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಳು ಎಂದು ಹೇಳಲಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…