ಗೋಣಿಕೊಪ್ಪ: ಕೆರೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತೂಚನಕೇರಿಯಲ್ಲಿ ನಡೆದಿದೆ.
ಮೂಕಳಮಾಡ ಸುರೇಶ್ ಎಂಬುವವರ ಪತ್ನಿ ಸುಮೀತಾ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಸುಮೀತಾ ಅವರು ಮಾನಸಿಕವಾಗಿ ಬಹಳ ನೊಂದಿದ್ದರು ಎನ್ನಲಾಗಿದೆ.
ಇಂದು ಬೆಳಿಗ್ಗೆ ಮನೆಯ ಬಳಿಯಿದ್ದ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





