ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳಪೆ ಕಾಮಗಾರಿ ಕುರಿತು ಗ್ರಾಮಸ್ಥರು ಸಂಸದ ಯದುವೀರ್ ಒಡೆಯರ್ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಸದರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಇದನ್ನು ಓದಿ: ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಚುರುಕು
ಬಳಿಕ ಜಿಲ್ಲಾ ಪಂಚಾಯತ್ ಸಿಇಒ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಹೈಸೊಡ್ಲೂರು ಗ್ರಾಮದಲ್ಲಿ 123 ಮನೆಗಳನ್ನು ಯೋಜನೆ ಅಡಿಯಲ್ಲಿ ಗುರುತಿಸಿ 83 ಮನೆಗಳಿಗೆ ಮಾತ್ರ ಸಂಪರ್ಕಿಸುವ ಕೆಲಸ ಆಗಿದೆ. ಕಳಪೆ ಕಾಮಗಾರಿ ಹಾಗೂ ನಿಧಾನಗತಿಯಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿದಾರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅಲ್ಲದೇ ಅಧಿಕಾರಿಗಳು ಪಂಚಾಯಿತಿ ಆಡಳಿತ ಮಂಡಳಿಯೊಂದಿಗೆ ಕೈಜೋಡಿಸಿ ಮಾಹಿತಿ ಹಂಚಿಕೊಂಡು ಕೆಲಸ ಮಾಡಬೇಕು. ಹತ್ತು ದಿನಗಳ ಕಾಲಾವಕಾಶದಲ್ಲಿ ಇಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…