Mysore
18
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಆ.22 ರಂದು ಕೊಡಗಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಮಡಿಕೇರಿ: ಸೋಮವಾರಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್2 ಶಾಂತಳ್ಳಿ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಆಗಸ್ಟ್, 22 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಯಡೂರು, ತಲ್ತಾರೆಶೆಟ್ಟಳ್ಳಿ, ತಾಕೇರಿ, ಕಿರಗಂದೂರು, ಬಸವನಕಟ್ಟೆ, ಶಾಂತಳ್ಳಿ, ಕುಂದಳ್ಳಿ, ಬಾಚಳ್ಳಿ, ಮಲ್ಲಳ್ಳಿ, ಬೆಟ್ಟದಳ್ಳಿ, ಬೆಟ್ಟದಕೊಪ್ಪ, ಹರಗ, ಕಲ್ಕಂದೂರು, ಹೊಸಬೀಡು, ತೋಳೂರು ಶೆಟ್ಟಳ್ಳಿ, ಹರಪಳ್ಳಿ, ಕೂತಿ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

ಹಾಗೆಯೇ ಪೊನ್ನಂಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್4 ತಿತಿಮತಿ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಫೀಡರ್‍ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ತಿತಿಮತಿ, ಮಾಯಾಮುಡಿ, ದೇವರಪುರ, ಹೆಬ್ಬಾಲೆ, ನೋಕ್ಯ, ದೇವರಪುರ, ಧನುಗಾಲ, ಕೋಣನಕಟ್ಟೆ ಹಾಗೂ ಸುತ್ತಮುತ್ತಲ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.

Tags:
error: Content is protected !!