ಮಡಿಕೇರಿ: ಸೋಮವಾರಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್2 ಶಾಂತಳ್ಳಿ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಆಗಸ್ಟ್, 22 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಯಡೂರು, ತಲ್ತಾರೆಶೆಟ್ಟಳ್ಳಿ, ತಾಕೇರಿ, ಕಿರಗಂದೂರು, ಬಸವನಕಟ್ಟೆ, ಶಾಂತಳ್ಳಿ, ಕುಂದಳ್ಳಿ, ಬಾಚಳ್ಳಿ, ಮಲ್ಲಳ್ಳಿ, ಬೆಟ್ಟದಳ್ಳಿ, ಬೆಟ್ಟದಕೊಪ್ಪ, ಹರಗ, ಕಲ್ಕಂದೂರು, ಹೊಸಬೀಡು, ತೋಳೂರು ಶೆಟ್ಟಳ್ಳಿ, ಹರಪಳ್ಳಿ, ಕೂತಿ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.
ಹಾಗೆಯೇ ಪೊನ್ನಂಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್4 ತಿತಿಮತಿ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಫೀಡರ್‍ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ತಿತಿಮತಿ, ಮಾಯಾಮುಡಿ, ದೇವರಪುರ, ಹೆಬ್ಬಾಲೆ, ನೋಕ್ಯ, ದೇವರಪುರ, ಧನುಗಾಲ, ಕೋಣನಕಟ್ಟೆ ಹಾಗೂ ಸುತ್ತಮುತ್ತಲ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…