ಕೊಡಗು: ಕೊಡಗಿನಲ್ಲಿ ಈ ಬಾರಿ ಪೂರ್ವ ಮುಂಗಾರು ಅಧಿಕವಾಗಿದ್ದು, ವಾಡಿಕೆಗಿಂತ ಶೇಕಡಾ 4ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರತಿದಿನ ಕೊಡಗಿನ ನಾನಾ ಭಾಗಗಳಲ್ಲಿ ಮಳೆಯಾಗುತ್ತಿದ್ದು, ತಿಂಗಳಾಂತ್ಯದ ವೇಳೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೇ ಮುಂಗಾರು ಶೀಘ್ರ ಆರಂಭದ ಮುನ್ಸೂಚನೆ ಇರುವುದರಿಂದ ಈ ತಿಂಗಳಲ್ಲಿ ಮಳೆ ಕೊರತೆ ಕಂಡುಬರುವುದಿಲ್ಲ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಈ ಮೂಲಕ ಕೊಡಗು ರೈತರಿಗೆ ಹವಾಮಾನ ಇಲಾಖೆ ಗುಡ್‌ನ್ಯೂಸ್ ನೀಡಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಬೆಳೆ ಬೆಳೆಯಬಹುದು ಎಂದು ಅಂದಾಜಿಸಲಾಗಿದೆ. ಈಗಾಗಲೇ ಕೊಡಗಿನಲ್ಲಿ ಬಿತ್ತನೆ ಕಾರ್ಯ ನಡೆದಿದ್ದು, ಬೆಳೆಗಳಿಂದ ಅಧಿಕ ಇಳುವರಿ ಪಡೆಯಬಹುದು ಎಂದು ಅಂದಾಜಿಸಿದ್ದಾರೆ.




