ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಜನಾಕ್ರೋಶ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಮೈಸೂರಿನಿಂದ ಪ್ರಾರಂಭವಾದ ಜನಾಕ್ರೋಶ ಯಾತ್ರೆಯು ಈಗ ಕೊಡಗು ಜಿಲ್ಲೆ ತಲುಪಿದ್ದು, ಬಿಜೆಪಿ ನಾಯಕರು ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.
ಜನಾಕ್ರೋಶ ಯಾತ್ರೆಯ ಸಭೆಯಲ್ಲಿಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ದಿನನಿತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಬಂದಿದೆ. ನೂರಾರು ಹಿಂದುಳಿದ ವರ್ಗಗಳನ್ನು ಬಿಟ್ಟು ಕೇವಲ ಮುಸ್ಲಿಂ ಓಲೈಕೆಯಲ್ಲಿ ಈ ಸರ್ಕಾರ ತೊಡಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನೀವೇ ಬುದ್ಧಿ ಕಲಿಸಬೇಕು ಎಂದು ಜನತೆಗೆ ಕರೆ ಕೊಟ್ಟರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…