ಮಡಿಕೇರಿ: ಮಡಿಕೇರಿ ತಾಲ್ಲೂಕು ಎಸ್.ಕಟ್ಟೆಮಾಡು ಗ್ರಾಮದಲ್ಲಿ ಜನವರಿ 14 ರಿಂದ ಫೆಬ್ರವರಿ 11 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಪ್ರಸ್ತುತ ಸ್ಥಳದಲ್ಲಿ ಉಂಟಾಗಿರುವ ಬೆಳವಣಿಗೆಗಳ ಸಂಬಂಧವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜನವರಿ 14 ರಂದು ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 11 ರ ಬೆಳಿಗ್ಗೆ 10 ಗಂಟೆವರೆಗೆ ಕಲಂ 163 ಬಿ.ಎನ್.ಎಸ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ವಿಸ್ತರಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ನಿಷೇಧಾಜ್ಞೆಯ ಅವಧಿಯಲ್ಲಿ ಎಸ್. ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಾಲಯದ ಸುತ್ತಮುತ್ತಲಿನ 200 ಮೀ. ವ್ಯಾಪ್ತಿಯಲ್ಲಿ 5 ಜನ ಗುಂಪು ಸೇರದಂತೆ, ಪ್ರತಿಭಟನೆ, ರ‍್ಯಾಲಿ ಮೆರವಣಿಗೆ, ಜಾಥ ನಡೆಸದಂತೆ, ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧ ವಿಧಿಸಲಾಗಿದೆ.