ಕೊಡಗು

ಪ್ರವಾಹ ಸಂತ್ರಸ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ: ಸಚಿವ ಎನ್‌ಎಸ್‌ ಭೋಸರಾಜು

ಮಡಿಕೇರಿ: ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಸಂತ್ರಸ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯವಿರು ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಕ್ಷಿಪ್ರ ನೆರವಿಗೆ ಸಜ್ಜಾಗಿರುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌ ಎಸ್‌ ಭೋಸರಾಜು ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಇಂದು ಕೊಡುಗು ಜಿಲ್ಲೆಯ ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಹಾಗೂ ಪ್ರವಾಹ ಪೀಡಿತ ಪ್ರದೇಶವಾದ ಕರಡಿಗೋಡು ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿ ಮಾತನಾಡಿದರು.

ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಅವರು ಸಂತ್ರಸ್ತರ ಅಹವಾಲು ಆಲಿಸಿದರು. ಊಟೋಪಾಚಾರ, ಆರೋಗ್ಯ ಸೇವೆ ಇತರ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆಯೇ ಎಂದು ಮಾಹಿತಿ ಪಡೆದರು. ಪ್ರವಾಹ ಪೀಡಿತ ಪ್ರದೇಶದಿಂದ ಸ್ಥಳಾಂತರವಾಗುವ ಬಗ್ಗೆ ಸಂತ್ರಸ್ತರ ಅಭಿಪ್ರಾಯ ಪಡೆದುಕೊಂಡರು.

ಇದಕ್ಕೆ ಪ್ರಕ್ರಿಯಿಸಿದ ಸಂತ್ರಸ್ತರು ಪ್ರತೀ ವರ್ಷ ಮಳೆಗಾಲ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಜೀವನ ನಡೆಸುವುದು ದುಸ್ತರವಾಗಿದೆ. ಬದುಕು ಕಟ್ಟಿಕೊಳ್ಳಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ನಿವೇಶನ ಒದಗಿಸಿ ಸ್ಥಳಾಂತರಿಸುವಂತೆ ಕೋರಿದರು.

ಕಾಳಜಿ ಕೇಂದ್ರದಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು. ಆರೋಗ್ಯ ಸೇವೆ ಸೇರಿದಂತೆ ಯಾವುದೇ ರೀತಿಯ ತೊಂಧರೆಗಳ ಆಗದೇ ಇರುವಂತಹ ರೀತಿಯಲ್ಲಿ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಬಳಿಕ ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಅಲ್ಲಿನ ಸಂತ್ರಸ್ತರ ಅಹವಾಲು ಆಲಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಸಂತ್ರಸ್ತರಿಗೆ ನಿವೇಶನ ಒದಗಿಸುವ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ ಹೆಚ್ಚು ಕುಟುಂಬಗಳು ಇದ್ದು, ಪ್ರತಿ ವರ್ಷ ಪ್ರವಾಹ ಪರಿಸ್ಥಿತಿ ಎದುರಾಗುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೋಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ರಾಮಚಂದ್ರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

7 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago