ಕೊಡಗು: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ನಾಳೆಯೂ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಇನ್ನು ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೊಡಗಿನಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ.





