Columbus
28
few clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಜಿಲ್ಲೆಯ ಮಳೆಯ ವಿವರ ಈ ಕೆಳಕಂಡಂತಿದೆ:

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 57.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 27.18 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 571.09 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1598.66 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 76.63 ಮಿ.ಮೀ. ಕಳೆದ ವರ್ಷ ಇದೇ ದಿನ 44.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 818.52 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2308.91 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದು 51.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 15.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 603.99 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1537.20 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದು 83.02 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 27.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 571.88 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1555.95 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದು ಮಳೆ 55.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 37.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 604.16 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1750.99 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದು 19.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 256.79 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 840.24 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ 60, ನಾಪೋಕ್ಲು 32, ಸಂಪಾಜೆ 49.50, ಭಾಗಮಂಡಲ 165, ವಿರಾಜಪೇಟೆ 64, ಅಮ್ಮತ್ತಿ 39, ಹುದಿಕೇರಿ 89, ಶ್ರೀಮಂಗಲ 82, ಪೊನ್ನಂಪೇಟೆ 125, ಬಾಳೆಲೆ 36.08, ಸೋಮವಾರಪೇಟೆ 54, ಶನಿವಾರಸಂತೆ 29, ಶಾಂತಳ್ಳಿ 83, ಕೊಡ್ಲಿಪೇಟೆ 55, ಕುಶಾಲನಗರ 10.20, ಸುಂಟಿಕೊಪ್ಪ 29 ಮಿ.ಮೀ.ಮಳೆಯಾಗಿದೆ.

 

Tags:
error: Content is protected !!