Mysore
28
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೊಡಗಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ ಸುರಿದ ಮಳೆಯ ಪ್ರಮಾಣ ಎಷ್ಟು ಗೊತ್ತಾ?

ಕೊಡಗು: ಈ ವರ್ಷ ಕೊಡಗಿನಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನವರಿಯಿಂದ ಇಲ್ಲಿಯವರೆಗೆ 2979.73 ಮಿ.ಮೀ ಮಳೆಯಾಗಿದೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 1683.51 ಮಿ.ಮೀ ಮಳೆಯಾಗಿತ್ತು. ಆದರೆ ಈ ಬಾರಿ ಧಾರಾಕಾರ ಮಳೆ ಸುರಿದಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಮಳೆಯಾಗಿದೆ.

ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲೇ ಅಧಿಕ ಮಳೆಯಾಗಿದೆ ಎಂದು ಹೇಳಲಾಗಿದೆ.

ಇನ್ನು ಮಡಿಕೇರಿಯಲ್ಲಿ ಕಳೆದ ವರ್ಷ ಜನವರಿಯಿಂದ ಇಲ್ಲಿಯವರೆಗೆ 2830.45 ಮಿ.ಮೀ ಮಳೆಯಾಗಿತ್ತು. ಆದರೆ ಈ ವರ್ಷ 4335.86 ಮಿ.ಮೀ ಮಳೆಯಾಗಿದೆ ಎಂದು ಅಂದಾಜಿಸಲಾಗಿದೆ.

ಈ ವರ್ಷ ದಾಖಲೆಯ ಹಿಂಗಾರು ಮಳೆ ಸುರಿದಿದ್ದು, ಹಿಂಗಾರು ಬೆಳೆ ಬೆಳೆಯಲು ರೈತರಿಗೆ ಭಾರೀ ಅನುಕೂಲ ಮಾಡಿಕೊಟ್ಟಂತಾಗಿದೆ.

 

Tags: