yellow rain alert
ಬೆಂಗಳೂರು : ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ ೨೪ರವರೆಗೂ ಭಾರೀ ವರ್ಷಧಾರೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಅಲರ್ಟ್ ಘೋಷಣೆ : ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ೩ ದಿನಗಳ ಕಾಲ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಎಲ್ಲೆಲ್ಲಿ ಮಳೆ ವರದಿ: ಕರ್ನಾಟಕದ ಬಹುತೇಕ ಕಡೆ ಮಳೆ ಹೆಚ್ಚಾಗಿದ್ದು, ಕಳೆದ ದಿನ ಮುಲ್ಕಿ, ಕೋಟಾ, ಬಂಟ್ವಾಳ, ಕಾರವಾರ, ಉಡುಪಿ, ಕಾರ್ಕಳ, ಭಾಗಮಂಡಲ, ಕುಂದಾಪುರ, ಮೂಡುಬಿದಿರೆ, ಹುಣಸಗಿ, ಬೆಳ್ತಂಗಡಿ, ಆಗುಂಬೆ, ಗೋಕರ್ಣ, ಹೊನ್ನಾವರದಲ್ಲಿ ಹೆಚ್ಚು ಮಳೆಯಾಗಿದೆ.
ಇನ್ನು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಲ್ಲಿ ಗುಡ್ಡ ಕುಸಿತದಂತಹ ಘಟನೆಗಳು ನಡೆದಿವೆ. ಮಂಗಳೂರು ಮತ್ತು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಕೊಪ್ಪಳ, ವಿಜಯನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಾಲೆಗೆ ರಜೆ ಘೋಷಣೆ: ರಾಜ್ಯದ ೧೪ ಜಿಲ್ಲೆಗಳಲ್ಲಿ ಜುಲೈ ೨೨ರ ವರೆಗೆ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಬುಧವಾರ ಮುನ್ಸೂಚನೆ ನೀಡಿತ್ತು. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರವೂ ರಜೆ ನೀಡಲಾಗಿತ್ತು.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಜೋರು ಮಳೆಯಾಗುವ ಮುನ್ಸೂಚನೆ ಇದೆ. ಈ ವಾಯುಭಾರ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಆಲತ್ತೂರು ಗ್ರಾಮದಲ್ಲಿ ಕಾಡಾನೆಗಳ ದಾಳಿಗೆ ಎರಡು ಎಕರೆಯಲ್ಲಿ ಬೆಳೆದಿದ್ದ ಬೀಟ್ರೋಟ್…
ಬೆಂಗಳೂರು: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ…
ಮಲ್ಲಿಗೆಯ ಮೈಸೂರಲಿ... ತಾಯಿ ಚಾಮುಂಡಿ ಮಡಿಲಲಿ ಮಲ್ಲಿಗೆಯ ಮೈಸೂರಲಿ ಅದ್ಧೂರಿ ಜಂಬೂ ಸವಾರಿ ಈ ಬಾರಿ, ಅಂಬಾರಿ ಹೊತ್ತ ಮೊದಲ…
ಇ -ಸಿಮ್ ತಂತ್ರeನದ ದುರ್ಬಳಕೆಯಿಂದ ಎಟಿಎಂ ಹಾಗೂ ಯುಪಿಐ ನಿಷ್ಕ್ರಿಯಗೊಂಡಿದ್ದರೂ ರೂ. ೪ ಲಕ್ಷದವರೆಗೆ ಸೈಬರ್ ವಂಚನೆ ನಡೆಯು ತ್ತಿರುವುದು…
ಮ್ಯಾನ್ಮಾರ್ ಸೇನೆಯು ಅಂಗ್ ಸಾನ್ ಸೂಕಿ ಅವರ ಚುನಾಯಿತ ಸರ್ಕಾರವನ್ನು ೨೦೨೧ ರ -ಬ್ರವರಿಯಲ್ಲಿ ಕೆಳಗಿಳಿಸಿ ಅಧಿಕಾರ ಕಸಿದುಕೊಂಡು ಬಂಧಿಸಿ,…