ಕೊಡಗು

ಮಡಿಕೇರಿಯಲ್ಲಿ ಹಾಲಿನ ಡೈರಿಗೆ ಕನ್ನಹಾಕಿದ ಖದೀಮರು

ಕೊಡಗು: ಮಡಿಕೇರಿ ಜಿಲ್ಲಾ ಆಸ್ಪತ್ರೆ ಎದುರಿನಲ್ಲಿರುವ ಕುಮಾರ್‌ ಎಂಬುವವರ ಹಾಲಿನ ಡೈರಿಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು 50 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.

ಮಧ್ಯರಾತ್ರಿ ಸುಮಾರು 12.50ರ ಸಮಯದಲ್ಲಿ ಬೈಕ್‌ನಲ್ಲಿ ಬಂದ ಮುಸುಕುದಾರಿ ಕಳ್ಳರು, ಕಬ್ಬಿಣದ ರಾಡ್‌ನಿಂದ ಬೀಗ ಮುರಿದು ಹಾಲಿನ ಡೈರಿ ಒಳಗೆ ನುಗ್ಗಿ 50 ಸಾವಿರ ರೂ.ಗಳಷ್ಟು ನಗದನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ಳರ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬ್ಯಾರಿ ಭಾಷೆ ಮಾತನಾಡಿ ಕಳ್ಳತನ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಕಳ್ಳರ ಕರಾಮತ್ತು ಡೈರಿಯಲ್ಲಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಮಡಿಕೇರಿ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೀನ್‌ ಡಿಸೋಜ

ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನವನಾದ ನಾನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿ ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜ್ಯಮಟ್ಟದ ವಾಹಿನಿಗಳಾದ ಸುದ್ದಿಟಿವಿ, ಸಮಯ ಟಿವಿ, ಸ್ಥಳೀಯ ವಾಹಿನಿಗಳಾದ ಕೊಡಗು ಚಾನಲ್, ಚಾನಲ್ 24 ಕರ್ನಾಟಕ ವಾಹಿನಿಗಳಲ್ಲಿ ಜಿಲ್ಲಾ ವರದಿಗಾರ, ಪತ್ರಿಕೆಗಳಾದ ಕನ್ನಡಪ್ರಭ, ಕಾವೇರಿ ಟೈಮ್ಸ್ ಸಂಸ್ಥೆಗಳಲ್ಲಿ ವರದಿಗಾರನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದೇನೆ. ಸದ್ಯ ಆಂದೋಲನ ಪತ್ರಿಕೆಯಲ್ಲಿ ಕಳೆದ ಸುಮಾರು 5 ವರ್ಷಗಳಿಂದ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್, ಷಟಲ್ ಬ್ಯಾಡ್ಮಿಂಟನ್, ಕೇರಂ ನೆಚ್ಚಿನ ಕ್ರೀಡೆಗಳಾಗಿವೆ.

Recent Posts

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

15 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

3 hours ago