Mysore
30
scattered clouds

Social Media

ಬುಧವಾರ, 18 ಮಾರ್ಚ್ 2026
Light
Dark

ಗಾಂಜಾ ಮಾರಾಟ‌ ; ಇಬ್ಬರ ಬಂಧನ

ಮಡಿಕೇರಿ: ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಬಳಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಂಟಿಕೊಪ್ಪ 2ನೇ ವಿಭಾಗದ ನಿವಾಸಿ ಸತ್ತಾರ್ ರಫೀಕ್ (40) ಮತ್ತು ಗದ್ದೆಹಳ್ಳ ನಿವಾಸಿ ವಿಷ್ಣು (21) ಎಂಬಿಬ್ಬರು ಬಂಧಿತ ಆರೋಪಿಗಳು.

ಆರೋಪಿಗಳಿಬ್ಬರು ಫೆ.27ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಟಿಕೊಪ್ಪ ಕಾಂಡನಕೊಲ್ಲಿ ರಸ್ತೆಯಲ್ಲಿರುವ ಚಾಮುಂಡೇಶ್ವರಿ ದೇವಾಲಯದ ಸಮೀಪದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ – ಸರಬರಾಜು ಮಾಡಲು ಯತ್ನಿಸುತ್ತಿದ್ದುದರ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 360 ಗ್ರಾಂ ಗಾಂಜಾ ವಶ ಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಾಗಿದೆ.

ಸೋಮವಾರಪೇಟೆ ಪೊಲೀಸ್ ಉಪವಿಭಾಗದ ಡಿಎಸ್ಪಿ ಡಿ.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕರಾದ ಕೆ. ರಾಜೇಶ್, ಸುಂಟಿಕೊಪ್ಪ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬಿ. ಹೆಚ್. ಜಗದೀಶ್ ಮತ್ತು ಸಿಬ್ಬಂದಿಗಳಾದ ಜಗದೀಶ್, ಪ್ರವೀಣ್. ನಿಶಾಂತ್, ಸೌಮ್ಯ. ಪುನೀತ್, ಸಂತೋಷ್ ಹಾಗೂ ಶ್ರೀಕಾಂತ್ ಕಾಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಸ್ಪಿ ಶ್ಲಾಘನೆ :
ಈ ಪ್ರಕರಣವನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಪಕರಾಗಿರುವ ಕೆ. ರಾಮರಾಜನ್ ಆವರು ಶ್ಲಾಘಿಸಿದ್ದಾರೆ.

Tags:
error: Content is protected !!