Mysore
25
haze

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕೊಡಗಿನಲ್ಲಿ ಅಸ್ಸಾಂ ರಾಜ್ಯ ಮೂಲದ ಆರೋಪಿಗಳಿಂದ ಗಾಂಜಾ ಮಾರಾಟ: ನಾಲ್ವರ ಬಂಧನ

ಕೊಡಗು: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ, ಇಮ್ತಿಯಾಜ್ ಆಲಿ, ರೋಹಿಥಾನ್ ಹಾಗೂ ಕೋಣನಕಟ್ಟೆ-ಸುಳುಗೋಡು ಗ್ರಾಮದ ನಿವಾಸಿ ಯೂಸೂಫ್ ಆಲಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ 2 ಕೆ.ಜಿ 481 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು.ಪಿ.ಕೆ, ಸಿದ್ದಾಪುರ ಪಿಎಸ್‌ಐ ರಾಘವೇಂದ್ರ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಶ್ಲಾಘಿಸಿದ್ದಾರೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಸಾಗಾಟ ಅಥವಾ ಮಾರಾಟದ ಕುರಿತು ಮಾಹಿತಿ ಇದ್ದರೆ ಪೊಲೀಸರ ಗಮನಕ್ಕೆ ತರುವಂತೆ ಎಸ್‌ಪಿ ಮನವಿ ಮಾಡಿದ್ದಾರೆ.

 

Tags:
error: Content is protected !!