ಕೊಡಗು: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ, ಇಮ್ತಿಯಾಜ್ ಆಲಿ, ರೋಹಿಥಾನ್ ಹಾಗೂ ಕೋಣನಕಟ್ಟೆ-ಸುಳುಗೋಡು ಗ್ರಾಮದ ನಿವಾಸಿ ಯೂಸೂಫ್ ಆಲಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತ ಆರೋಪಿಗಳಿಂದ 2 ಕೆ.ಜಿ 481 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು.ಪಿ.ಕೆ, ಸಿದ್ದಾಪುರ ಪಿಎಸ್‌ಐ ರಾಘವೇಂದ್ರ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಶ್ಲಾಘಿಸಿದ್ದಾರೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಸಾಗಾಟ ಅಥವಾ ಮಾರಾಟದ ಕುರಿತು ಮಾಹಿತಿ ಇದ್ದರೆ ಪೊಲೀಸರ ಗಮನಕ್ಕೆ ತರುವಂತೆ ಎಸ್‌ಪಿ ಮನವಿ ಮಾಡಿದ್ದಾರೆ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…