Mysore
23
overcast clouds

Social Media

ಸೋಮವಾರ, 23 ಜೂನ್ 2025
Light
Dark

ಕೊಡಗು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹತ್ಯೆ ಮಾಡಿದ್ದ ಆರೋಪಿಯ ಬಂಧನ

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಗುರುವಾರ (ಮೇ. 9) ಸಂಜೆ ವೇಳೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೀನಾ ಅವರ ದಾರುಣ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಗಾರ ಹಾಗೂ ಬಾಲಕಿ ಜತೆ ನಡೆದಿದ್ದ ನಿಶ್ಚಿತಾರ್ಥ ಮುರಿದುಬಿದ್ದಿತ್ತು. ಇದರಿಂದ ಕುಪಿತಕೊಂಡಿದ್ದ ಓಂಕಾರಪ್ಪ ಮೀನಾ ಪೋಷಕರ ಮುಂದೆಯೇ ಆಕೆಯನ್ನು ಎಳೆದೊಯ್ದು, ನಿರ್ಜನ ಪ್ರದೇಶದಲ್ಲಿ ರುಂಡ ಮುಂಡ ಬೇರೆ ಮಾಡಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ.

ಸೋಮವಾರಪೇಟೆಯ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಕೊಡಗು ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ತಿಳಿಸಿದ್ದಾರೆ.

Tags:
error: Content is protected !!