ಕೊಡಗು

ಕೊಡಗಿನಲ್ಲಿ ಮುಂದುವರಿದ ಮಳೆ: ಅಂಗನವಾಡಿ, ಶಾಲೆಗಳಿಗೆ ರಜೆ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ(ಜು.16) ರಜೆ ಘೋಷಿಸಲಾಗಿದೆ. ಹಾಗೂ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶರಾದ ರಂಗಧಾಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು ಹಾಗೂ ಪದವಿಪೂರ್ವ ಕಾಲೇಜಿನ ಉಪನಿರ್ದೇಶಕರಾದ ಮಂಜುಳಾ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಸೋಮವಾರದಿಂದಲೇ ವಿಪರೀತ ಮಳೆಯಾಗುತ್ತಿದ್ದು, ಎಲ್ಲಿಯೂ ಮಳೆ ನಿಂತಿಲ್ಲ. ಮಳೆ ವಿಕೋಪಕ್ಕೆ ತಿರುಗುವ ಎಲ್ಲಾ ಮುನ್ಸೂಚನೆಗಳು ಕಂಡುಬಂದ ಹಿನ್ನೆಲಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರಗಳನ್ನು ಕೈಗೊಂಡಿದೆ.

ಭಾಗಮಂಡಲದಲ್ಲಿ ಒಂದೇ ದಿನ 100-150 ಮಿಮೀ ಮಳೆಯಾಗಿದ್ದು, ನದಿ ತೀರದ ಪ್ರದೇಶಗಳಲ್ಲಿನ ಗ್ರಾಮದ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಿದ್ದು, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಭಾಗಮಂಡಲದ ತ್ರಿವೇಣಿ ಸಂಗಮ ಭಾಗಶಃ ಮುಳುಗಡೆಯಾಗಿದೆ. ಇತ್ತ ಹಾರಂಗಿ ಜಲಾಶಯ ಕೂಡಾ ಭರ್ತಿಯಾಗುತ್ತಿದ್ದು, ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗುವ ಮುನ್ಸೂಚನೆ ಬೆನ್ನಲ್ಲೇ ಜಿಲ್ಲಾಡಳಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

3 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

3 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

4 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

4 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

4 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

5 hours ago