Pushing during Dasara prize distribution: DYSP injured; admitted to hospital
ಮಡಿಕೇರಿ : ದಸರಾ ಅಂಗವಾಗಿ ನಡೆದ ದಶಮಂಟಪಗಳ ಶೋಭಾಯಾತ್ರೆಯ ಬಹುಮಾನ ವಿತರಣೆ ಸಂದರ್ಭದಲ್ಲಿ ವೇದಿಕೆ ಹತ್ತಿ ಗಲಾಟೆ ಮಾಡಲು ಯತ್ನಿಸಿದ ಯುವಕರನ್ನು ಕೆಳಗೆ ಕಳುಹಿಸಲು ಯತ್ನಿಸುತ್ತಿದ್ದ ಡಿವೈಎಸ್‌ಪಿಯೊಬ್ಬರಿಗೆ ಗಾಯಗಳಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ದಶಮಂಟಪಗಳ ಬಹುಮಾನ ವಿತರಣೆ ವೇಳೆ ಈ ಬಾರಿಯೂ ಅಸಮಾಧಾನ ವ್ಯಕ್ತವಾಗಿದ್ದು, ಕರವಲೆ ಭಗವತಿ ದೇವಾಲಯದ ಮಂಟಪ ಸಮಿತಿ ಸದಸ್ಯರು ಬಹುಮಾನ ವಿತರಣೆಯಲ್ಲಿ ತಾರತಮ್ಯ ಮಾಡಲಾಗಿದೆ ಎಂದು ವೇದಿಕೆ ಹತ್ತಿ ಅಸಮಾಧಾನ ಹೊರಹಾಕಿದ್ದರು. ಇದೇ ವೇಳೆ ಯುವಕರನ್ನು ಕಳುಹಿಸಲು ಡಿವೈಎಸ್‌ಪಿ ಸೂರಜ್ ವೇದಿಕೆ ಏರಿದ್ದರು. ಈ ವೇಳೆ ತಳ್ಳಾಟ ನೂಕಾಟ ನಡೆದಿದ್ದು, ಸೂರಜ್ ಅವರು ವೇದಿಕೆಯಿಂದ ಕೆಳಭಾಗಕ್ಕೆ ಬಿದ್ದಿದ್ದಾರೆ. ಘಟನೆಯಿಂದ ತಲೆ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಇದನ್ನು ಓದಿ : ಮಡಿಕೇರಿ ದಸರೆಗೆ ಅದ್ದೂರಿ ತೆರೆ
ಈ ಬಗ್ಗೆ ಪ್ರತಿಕ್ರಿಯಿಸಿರುವ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಬೆಳಿಗ್ಗೆ ೭.೪೫ರಿಂದ ೮ ಗಂಟೆ ಸಮಯದಲ್ಲಿ ಯುವಕರ ತಂಡ ಬಹುಮಾನ ವಿತರಣೆ ಸಂಬಂಧವಾಗಿ ಅಸಮಾಧಾನ ಹೊರಹಾಕಲು ವೇದಿಕೆ ಏರಿದ್ದರು. ಈ ವೇಳೆ ಯಕ್ಷಿತ್ ಎಂಬ ಯುವಕನನ್ನು ಕೆಳಗಿಳಿಸಲು ಡಿವೈಎಸ್‌ಪಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಪ್ರಯತ್ನಿಸಿದ್ದರು. ಆ ಸಂದರ್ಭದಲ್ಲಿ ಯಕ್ಷಿತ್ ಡಿವೈಎಸ್‌ಪಿ ಅವರ ಮಾತಿಗೆ ಬೆಲೆ ಕೊಡದೆ ಅವರನ್ನು ತಳ್ಳಿರುವುದರಿಂದ ಮೇಲಿನಿಂದ ಕೆಳಕ್ಕೆ ಬಿದ್ದಿದ್ದಾರೆ. ಅವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಬಿಎನ್‌ಎಸ್ ಆಕ್ಟ್ ೧೩೨, ೩೫೫ರಡಿ ಪ್ರಕರಣ ದಾಖಲಿಸುತ್ತಿದ್ದೇವೆ ಎಂದರು.
ಪ್ರತಿ ಬಾರಿಯೂ ಬಹುಮಾನ ವಿತರಣೆ ವೇಳೆ ಗಲಾಟೆ ನಡೆಯುತ್ತದೆ. ಈ ಬಾರಿ ಮೊದಲೇ ಎಚ್ಚರಿಕೆ ನೀಡಲಾಗಿತ್ತು. ಆದರೂ ಸ್ಥಳದಲ್ಲಿ ಗಲಾಟೆ ಮಾಡಲಾಗಿದ್ದು, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…