Mysore
28
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ.

ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಆನೆಕಾಡು ಸಮೀಪ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಆನೆಕಾಡು ಬಳಿ ಮಜಿದ್‌ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಕಾರ್‌ನಿಂದ ಇಳಿದು ಅಬ್ದುಲ್‌ ಮಜಿದ್‌ ಹಾಗೂ ಚಾಲಕ ಪಾರಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕುಶಾಲನಗರ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

 

Tags:
error: Content is protected !!