ಕೊಡಗು

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ.

ಕಳೆದ ಎರಡು ದಿನಗಳ ಹಿಂದಷ್ಟೇ ಸಮೀಪದ ಕೂತಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಫಿ ತೋಟಕ್ಕೆ ನುಗ್ಗಿ ಕಾಫಿ ಗಿಡಗಳನ್ನು ತುಳಿದು ಹಾನಿ ಮಾಡಿತ್ತು. ಬಳಿಕ ಸ್ಥಳೀಯ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸೇರಿ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯ ನಡೆಸಿದ್ದರು. ಆದರೆ ಇದೀಗ ಅದೇ ಕಾಡಾನೆಗಳ ಹಿಂಡು ಕುಂದಳ್ಳಿ, ನಗರಳ್ಳಿ ಭಾಗದಲ್ಲಿ ಮತ್ತೆ ಕಾಣಿಸಿಕೊಂಡಿದ್ದು, ಮರಿಯಾನೆ ಸೇರಿ ಏಳು ಆನೆಗಳು ಬೀಡುಬಿಟ್ಟಿವೆ. ಇದರ ಜೊತೆಗೆ ಇದೇ ವ್ಯಾಪ್ತಿಯಲ್ಲಿ ಒಂಟಿ ಸಲಗವೊಂದು ಸಂಚರಿಸುತ್ತಿದ್ದು ಇದರ ಆತಂಕ ಸಾರ್ವಜನಿಕರಲ್ಲಿ ಮೂಡಿದೆ.

ಕುಂದಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಕಾಡಾನೆಗಳು ಲೋಕೇಶ್, ಜೋಯಪ್ಪ ಹಾಗೂ ಶರತ್ ಅವರಿಗೆ ಸೇರಿದ ಕಾಫಿ ತೋಟಗಳಿಗೆ ನುಗ್ಗಿ ಕಾಫಿ ಗಿಡಗಳನ್ನು ತುಳಿದು ನಾಶಪಡಿಸಿವೆ.

ಒಂದು ಕಡೆ ಕಾಡಾನೆಗಳನ್ನು ಓಡಿಸುವ ಕಾರ್ಯ ನಡೆಯುತ್ತಿದ್ದರೂ ಮತ್ತೊಂದು ಕಡೆ ಮತ್ತೆ ಅದೇ ಆನೆಗಳು ಬೇರೆ ಪ್ರದೇಶದಲ್ಲಿ ಅವುಗಳ ಹಾವಳಿ ಮುಂದುವರಿದಿದೆ. ಆದ್ದರಿಂದ ಅರಣ್ಯ ಇಲಾಖೆ ಶಾಶ್ವತ ಕ್ರಮ ಕೈಗೊಂಡು ಕಾಡಾನೆಗಳನ್ನು ಬಿಸಿಲೆ ಅರಣ್ಯ ಪ್ರದೇಶದತ್ತ ಸ್ಥಳಾಂತರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

4 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

4 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

5 hours ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

5 hours ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…

5 hours ago

ಓದುಗರ ಪತ್ರ: ಸೌಜನ್ಯಾ ಪ್ರಕರಣದಲ್ಲಿ ನ್ಯಾಯ ದೊರೆಯುವುದೇ?

೧೪ ವರ್ಷಗಳಿಂದ ಪೊಲೀಸ್ ತನಿಖೆ ನ್ಯಾಯಾಲಯ / ಸಿಬಿಐ / ತನಿಖಾ ಸಂಸ್ಥೆಗಳಲ್ಲಿ ‘ಅಲೆದಾಟ’ನಡೆಸುತ್ತಿರುವ ಸೌಜನ್ಯಾ ಪ್ರಕರಣದಲ್ಲಿ ನಿಜಕ್ಕೂ ನ್ಯಾಯ…

5 hours ago