ಕೊಡಗು

ಶೂ ಎಸೆದ ಪ್ರಕರಣ : ದೇಶದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಸೋಮವಾರಪೇಟೆ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣ ಸಂವಿಧಾನ ವಿರೋಧವಾಗಿದ್ದು, ಆರೋಪಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಕೊಡಗು ಜಿಲ್ಲಾ ದಲಿತ ಹಿತರಕ್ಷಣಾ ಒಕ್ಕೂಟ ಆಗ್ರಹಿಸಿದೆ.

ಅರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅ.೧೦ರಂದು ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಗುವುದು. ಪ್ರತಿಭಟನೆಯಲ್ಲಿ ಪ್ರಗತಿಪರ ಚಿಂತಕರು, ದಲಿತಪರ ಹೋರಾಟಗಾರರು ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಜಯಪ್ಪ ಹಾನಗಲ್ ಹೇಳಿದರು.

ಇದನ್ನೂ ಓದಿ: ಬಿಗ್‌ಬಾಸ್‌ ಬಂದ್‌ ಹಿಂದೆ ಡಿಕೆಶಿ ಕೈವಾಡವಿಲ್ಲ: ಸಚಿವ ಈಶ್ವರ್‌ ಖಂಡ್ರೆ ಸ್ಪಷ್ಟನೆ

ನ್ಯಾಯಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ಸಮಯದಲ್ಲಿ ನ್ಯಾಯಧೀಶ ರಾಕೇಶ್ ಕಿಶೋರ್ ಎಂಬ ವ್ಯಕ್ತಿ ಸನಾತನ ಧರ್ಮಕ್ಕೆ ಅವಹೇಳನವಾಗುವುದನ್ನು ಸಹಿಸುವುದಿಲ್ಲ ಎಂಬುದಾಗಿ ಹೇಳಿ ಶೂ ಎಸೆದಿರುವುದು ಸಂವಿಧಾನ ವಿರೋಧ ಕ್ರಮವಾಗಿದೆ. ಕಾನೂನು ತಿಳಿದಿರುವ ವ್ಯಕ್ತಿ ಸಂವಿಧಾನವನ್ನು ಗೌರವಿಸಬೇಕೆಂಬ ಪರಿಜ್ಞಾನವಿಲ್ಲರುವುದು ಖಂಡನೀಯ. ಇವರ ಹಿಂದಿನ ಸನಾತನ ಸಿದ್ಧಾಂತವೇ ಈ ರೀತಿ ವರ್ತಿಸುವಂತೆ ಮಾಡಿದೆ ಎಂದು ಹೇಳಿದರು.

ಒಕ್ಕೂಟದ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ ಮಾತನಾಡಿ, ಶೂ ಎಸೆತ ಕೃತ್ಯವನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಖಂಡಿಸಿದ್ದಾರೆ. ಅರೋಪಿ ರಾಕೇಶ್ ಕಿಶೋರ್ ವಿರುದ್ಧ ಕಠಿಣ ಕ್ರಮವಾಗಬೇಕು. ಸಂವಿಧಾನ ವಿರೋಧಿಗಳಿಗೆ ಕಾನೂನಿನ ಮೂಲಕವೇ ತಕ್ಕಪಾಠ ಕಲಿಸಬೇಕು. ಅರೋಪಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವ ತನಕ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟವನ್ನು ರೂಪಿಸಲಾಗುವುದು. ಮೊದಲು ಅ.೧೦ರಂದು ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ಮಾಡಿದ ನಂತರ ತಹಸೀಲ್ದಾರ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.

ಒಕ್ಕೂಟದ ಕಾರ್ಯದರ್ಶಿ ಬಿ.ಇ.ಜಯೇಂದ್ರ, ಸಹಕಾರ್ಯದರ್ಶಿ ಮಹೇಶ್, ಪದಾಽಕಾರಿ ಈರಪ್ಪ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

12 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

14 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago