Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೊಡಗು| ಜಿಲ್ಲಾಡಳಿತದಿಂದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮ

ಮಡಿಕೇರಿ: ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ (ಆ.26) ನಡೆದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.

ಮಹಾಭಾರತದಲ್ಲಿ ಶ್ರೀಕೃಷ್ಣನ ಬಗ್ಗೆ ಒಳ್ಳೆಯ ಸಂದೇಶ ತಿಳಿಯುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ. ಜೀವನದಲ್ಲಿ ನಿಂತ ನೀರಾಗದೆ ಹರಿವ ನೀರಿನಂತೆ ಬದುಕನ್ನು ಮುನ್ನಡೆಸಬೇಕು. ಉತ್ತಮ ಬದುಕು ರೂಪಿಸಿಕೊಳ್ಳಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಮಹಾಭಾರತದಲ್ಲಿ ಶ್ರೀಕೃಷ್ಣನ ಸಂದೇಶಗಳು ಧನಾತ್ಮಕ ಚಿಂತನೆಯನ್ನು ಒಳಗೊಂಡಿದೆ. ಶ್ರೀಕೃಷ್ಣ ಒಂದು ರೀತಿ ವಿಶಿಷ್ಟ ಚೇತನರಾಗಿದ್ದಾರೆ. ಅರಾಜಕತೆ, ಅಧರ್ಮ ಸಹಿಸುತ್ತಿರಲಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.

ಕಂಚಿ ಕಾಮಾಕ್ಷಿ ದೇವಾಲಯದ ಗೌರವ ಅಧ್ಯಕ್ಷ ಜಿ.ವಿ.ರವಿಕುಮಾರ್ ಅವರು ಮಾತನಾಡಿ ಜೀವನದಲ್ಲಿ ಮಾನವೀಯ ಮೌಲ್ಯ ಮತ್ತು ಆದ್ಯಾತ್ಮಿಕತೆಯನ್ನು ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ದ್ವೇಷ, ಅಸೂಯೆ, ಅಸಹನೆ, ಅಸಹಿಷ್ಣುತೆ ಇರಬಾರದು. ಒಳ್ಳೆಯದನ್ನು ರೂಡಿಸಿಕೊಳ್ಳಬೇಕು ಎಂದರು.

ಇಸ್ಕಾನ್ ಸಂಸ್ಥೆಯ ಚೈತನ್ಯದಾಸ್ ಪ್ರಭು, ಬಸವರಾಜ ಪ್ರಭು, ಕಂಚಿ ಕಾಮಾಕ್ಷಮ್ಮ ದೇವಾಲಯ ಸಮಿತಿಯ ಅಧ್ಯಕ್ಷ ಪವನ್ ಜಿ.ಬಿ., ಗೌರವಾಧ್ಯಕ್ಷ ಜಿ.ಜಿ.ಬಾಲಕೃಷ್ಣ ಇತರರು ಇದ್ದರು.

Tags: