Mysore
27
scattered clouds

Social Media

ಮಂಗಳವಾರ, 16 ಜೂನ್ 2026
Light
Dark

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ ಒಂಟಿಯಂಗಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಅಭ್ಯತ್‌ಮಂಗಲ ಒಂಟಿಯಂಗಡಿ ಗ್ರಾಮದ ನಿವಾಸಿ ಅಂಚೆಮನೆ ಸುದಕುಮಾರ್(೫೬) ಗಾಯಗೊಂಡ ಬೆಳೆಗಾರರು. ಮಂಗಳವಾರ ರಾತ್ರಿ ತಮ್ಮ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಕಾಡಾನೆಯೊಂದು ದಾಳಿ ನಡೆಸಿದೆ.

ದಾಳಿ ವೇಳೆ ಸುದಕುಮಾರ್ ಅವರ ಕಿರುಚಾಟ ಕೇಳಿದ ಸ್ಥಳೀಯರು ಹೊರಬಂದು ಶಬ್ಧ ಮಾಡಿ ಕಾಡಾನೆಯನ್ನು ಓಡಿಸಿದ್ದಾರೆ. ಆದರೆ, ದಾಳಿಯಿಂದ ಸುದಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಅಮ್ಮತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬೆಳೆಗಾರರು ಹಾಗೂ ತೋಟದ ಕಾರ್ಮಿಕರಲ್ಲಿ ಆತಂಕ ಮನೆ ಮಾಡಿದೆ. ಕಾಡಾನೆಗಳು ಗ್ರಾಮಗಳಿಗೆ ನಿರಂತರವಾಗಿ ನುಗ್ಗುತ್ತಿರುವುದರಿಂದ ರಾತ್ರಿ ವೇಳೆ ಓಡಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

Tags:
error: Content is protected !!