ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ ಒಂಟಿಯಂಗಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಅಭ್ಯತ್‌ಮಂಗಲ ಒಂಟಿಯಂಗಡಿ ಗ್ರಾಮದ ನಿವಾಸಿ ಅಂಚೆಮನೆ ಸುದಕುಮಾರ್(೫೬) ಗಾಯಗೊಂಡ ಬೆಳೆಗಾರರು. ಮಂಗಳವಾರ ರಾತ್ರಿ ತಮ್ಮ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಕಾಡಾನೆಯೊಂದು ದಾಳಿ ನಡೆಸಿದೆ.
ದಾಳಿ ವೇಳೆ ಸುದಕುಮಾರ್ ಅವರ ಕಿರುಚಾಟ ಕೇಳಿದ ಸ್ಥಳೀಯರು ಹೊರಬಂದು ಶಬ್ಧ ಮಾಡಿ ಕಾಡಾನೆಯನ್ನು ಓಡಿಸಿದ್ದಾರೆ. ಆದರೆ, ದಾಳಿಯಿಂದ ಸುದಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಅಮ್ಮತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬೆಳೆಗಾರರು ಹಾಗೂ ತೋಟದ ಕಾರ್ಮಿಕರಲ್ಲಿ ಆತಂಕ ಮನೆ ಮಾಡಿದೆ. ಕಾಡಾನೆಗಳು ಗ್ರಾಮಗಳಿಗೆ ನಿರಂತರವಾಗಿ ನುಗ್ಗುತ್ತಿರುವುದರಿಂದ ರಾತ್ರಿ ವೇಳೆ ಓಡಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…