ಮಡಿಕೇರಿ: ವಯನಾಡು ಮೇಪಾಡಿ ಭೂಕುಸಿತ ದುರಂತದಲ್ಲಿ ಸಂಬಂಧಿಕರ ಮನೆಗೆ ತೆರಳಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಸಿದ್ದಾಪುರ ಗುಯ್ಯ ಸರಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿರುವ ರೋಹಿತ್ ಎಂಬ ವಿದ್ಯಾರ್ಥಿಯು ಸಾವನ್ನಪ್ಪಿದ್ದು ಬುಧವಾರ ಬಾಲಕನ ಮೃತದೇಹ ಪತ್ತೆಯಾಗಿದೆ.
ಗುಯ್ಯ ಶಾಲೆ ಬಳಿ ಬಾಡಿಗೆ ಮನೆಯಲ್ಲಿರುವ ರವಿ ಮತ್ತು ಕವಿತಾ ದಂಪತಿಗಳು ಕೂಲಿಕಾರ್ಮಿಕರಾಗಿದ್ದು ತಾಯಿ ಕವಿತಾಳೊಂದಿಗೆ ಮೇಪಾಡಿ ಹೋಗಿದ್ದ ರೋಹಿತ್ ಸಂಬಂಧಿಕರ ಮನೆಯಲ್ಲಿದ್ದ. ಸೋಮವಾರ ರಾತ್ರಿ ನಡೆದ ವಯನಾಡು ದುರಂತದಲ್ಲಿ ಬಾಲಕ ಕೂಡ ಮಣ್ಣಿನಡಿ ಕೊಚ್ಚಿಹೋಗಿದ್ದು ಇಂದು ರಕ್ಷಣಾ ಕಾರ್ಯಾಚರಣೆ ಮಾಡುತ್ತಿರುವ ತಂಡಕ್ಕೆ ಬಾಲಕನ ಮೃತದೇಹ ದೊರೆತಿದೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…