ಸೋಮವಾರಪೇಟೆ : ಶಾಂತಳ್ಳಿ – ಸುಬ್ರಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಜೇಡಿಗುಂಡಿ ಬಳಿ ಮತ್ತೆ ಭೂ ಕುಸಿತ ಉಂಟಾಗಿದೆ.
ಕಳೆದ ವರ್ಷ ಇದೇ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಂಭವಿಸಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಇತ್ತೀಚೆಗೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೇಲಿನಿಂದ ಮತ್ತೆ ಮಣ್ಣು ಜರಿಯಲು ಆರಂಭವಾಗಿದೆ. ಭಾರೀ ಪ್ರಮಾಣದಲ್ಲಿ ಮಣ್ಣು ಜರಿದು ರಸ್ತೆ ಮತ್ತೆ ಬಂದ್ ಆಗುವ ಸಾಧ್ಯತೆ ಇದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





