ಕೊಡಗು

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ ಭಸ್ಮವಾಗಿದೆ.

ನೆನ್ನೆ ತಡರಾತ್ರಿ ಗ್ರಾಮದ ನಿವಾಸಿ ಪುಷ್ಪ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು. ಪುಷ್ಪ ಅವರು ತಮ್ಮ ಮೊಮ್ಮಗ ಹರ್ಷಿತ್‌ನೊಂದಿಗೆ ಗಾಢ ನಿದ್ರೆಯಲ್ಲಿದ್ದರು. ಬೆಂಕಿ ತೀವ್ರಗೊಳ್ಳುತ್ತಿದ್ದಂತೆ ಎಚ್ಚರಗೊಂಡ ಪುಷ್ಪ ಅವರು ತಕ್ಷಣ ಅಕ್ಕಪಕ್ಕದವರಿಗೆ ಕೂಗಿ ಸಹಾಯ ಕೋರಿದರು. ತಕ್ಷಣ ಸ್ಪಂದಿಸಿದ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ಅವರು ಧಾವಿಸಿ ಬಂದು ಮನೆಯೊಳಗೆ ಸಿಲುಕಿಕೊಂಡಿದ್ದ ಬಾಲಕ ಹರ್ಷಿತ್‌ನನ್ನು ಸುರಕ್ಷಿತವಾಗಿ ಹೊರಕ್ಕೆ ತಂದರು. ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರೂ ತೀವ್ರವಾಗಿದ್ದರಿಂದ ಸಾಧ್ಯವಾಗಲಿಲ್ಲ. ತಕ್ಷಣ ಸೋಮವಾರಪೇಟೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದರು.

ಬೆಂಕಿಯಿಂದ ಮನೆಯ ಎಲ್ಲಾ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಫರ್ನಿಚರ್, ಬಟ್ಟೆಗಳು, ಆಹಾರ ಸಾಮಗ್ರಿ, ವೈಯಕ್ತಿಕ ದಾಖಲೆಗಳು ಹಾಗೂ ಇತರ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ. ಅಂದಾಜು ನಷ್ಟ 5 ಲಕ್ಷಕ್ಕಿಂತ ಹೆಚ್ಚು ಎಂದು ಸ್ಥಳೀಯರು ತಿಳಿಸಿದ್ದಾರೆ.

ಪುಷ್ಪ ಮತ್ತು ಹರ್ಷಿತ್ ಸುರಕ್ಷಿತರಾಗಿದ್ದು, ಸ್ಥಳೀಯರ ಸಹಾಯದಿಂದ ತಾತ್ಕಾಲಿಕವಾಗಿ ಇತರ ಮನೆಯಲ್ಲಿ ತಂಗಿದ್ದಾರೆ. ಗ್ರಾಮಸ್ಥರು ಅವರಿಗೆ ಆಹಾರ, ಬಟ್ಟೆ ಮತ್ತು ಇತರ ಸಹಾಯ ನೀಡುತ್ತಿದ್ದಾರೆ. ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಘಟನೆಯ ತನಿಖೆ ನಡೆಸುತ್ತಿದ್ದಾರೆ. ಬೆಂಕಿಯ ನಿಖರ ಕಾರಣ ಶೀಘ್ರದಲ್ಲೇ ತಿಳಿಯಲಿದೆ ಎಂದು ತಿಳಿದುಬಂದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

3 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago