ಕೊಡಗು

ಸೋಮವಾರಪೇಟೆ | ಅಪ್ರಾಪ್ತನಿಂದ ವಾಹನ ಚಾಲನೆ ; ಪೋಷಕರಿಗೆ 20 ಸಾವಿರ ರೂ.ದಂಡ ವಿಧಿಸಿದ ಕೋರ್ಟ್‌

ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು. ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾದ ಮುದ್ದು ಮಾದೇವ್ ಅವರು ಯು.ಎಂ. ರಮೇಶ್ ರವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ ಸೋಮವಾರಪೇಟೆ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾ. ಕೆ. ಗೋಪಾಲಕೃಷ್ಣ ಅವರು ಇಂದು ರೂ. 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

55 mins ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

60 mins ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

1 hour ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

1 hour ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

1 hour ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

1 hour ago