ಸೋಮವಾರಪೇಟೆ: ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಹುಲಿ ಸಂಚಾರದ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಯಾಗಿದೆ.
ರಾತ್ರಿ 8 ಗಂಟೆಯ ಸುಮಾರಿಗೆ ಚನ್ನಾಪುರ ಗ್ರಾಮದ ಕೆರೆಯ ತಟದ ರಸ್ತೆಯಲ್ಲಿ ಹುಲಿ ಸಂಚರಿಸಿದ ಬಗ್ಗೆ ಅರಣ್ಯ ಇಲಾಖೆಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಬೆಳಿಗ್ಗೆ ಸ್ಥಳಕ್ಕೆ ಬಂದ ಅರಣ್ಯ ಇಲಾಣೆ ಅಧಿಕಾರಿಗಳು ಹುಲಿಯ ಹೆಚ್ಚೆಯ ಗುರುತು ಪತ್ತೆ ಹಚ್ಚಿದ್ದಾರೆ. ಹೀಗಾಗಿ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಗ್ರಾಮದ ರಸ್ತೆಯ ಬದಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಹುಲಿಯ ಚಲನವಲನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.