ಕೊಡಗು

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿದ್ದಾಪುರದ ವೀರಾಜಪೇಟೆ ರಸ್ತೆಯ ಮಂಟಪವೊಂದರ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಟಿಂಬರ್ ಯೂನಿಯನ್ ಸಭೆ ನಡೆಯುತ್ತಿತ್ತು. ಆ ವೇಳೆ ಸದಸ್ಯತ್ವದ ಹಣದ ವಿಚಾರವಾಗಿ ಸದಸ್ಯರ ನಡುವೆ ವಾಗ್ವಾದ ಉಂಟಾಗಿ, ಅದು ಬಳಿಕ ಗಲಾಟೆಗೆ ತಿರುಗಿದೆ ಎಂದು ತಿಳಿದುಬಂದಿದೆ.

ಟಿಂಬರ್ ವ್ಯಾಪಾರಿಗಳಾದ ಅರ್ಫಾನ್ ಅಹ್ಮದ್ ಹಾಗೂ ಮಹಮ್ಮದ್ ಸಫ್ಘಾನ್ ಅವರಿಗೆ ಟಿಂಬರ್ ಯೂನಿಯನ್ ಸದಸ್ಯರಾದ ಮೂಸಾ, ಸಜಾದ್, ಕಬೀರ್, ಸಿರಾಜ್ ಫಿರೋಜ್ ಸೇರಿ ಚೂರಿ ಹಾಗೂ ಬೈಕ್ ಕೀ ಬಳಸಿ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ನೆಲ್ಲಿಹುದಿಕೇರಿ ಗ್ರಾಮದ ನಿವಾಸಿಯಾದ ಗಾಯಾಳು ಅರ್ಫಾನ್ ಅಹ್ಮದ್ ನೀಡಿದ ದೂರಿನ ಮೇರೆಗೆ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

 

 

 

 

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

1 hour ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

14 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

15 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

15 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

15 hours ago