Mysore
26
haze

Social Media

ಮಂಗಳವಾರ, 03 ಮಾರ್ಚ್ 2026
Light
Dark

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

yaduveer

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಕೊಡಗಿನ ನಾಪೋಕ್ಲುವಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಹಿಂದೂ ಸಂಗಮ ಕಾರ್ಯಕ್ರಮ ಆಯೋಜನ ವೇಳೆ ಅಹಿತಕರ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಭಾಗದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಗೆ ಬದುಕಲು ಕಷ್ಟ ಆಗುತ್ತಿದೆ ಎಂಬುದು ಗಂಭೀರವಾದ ವಿಚಾರ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನು ವ್ಯವಸ್ಥೆ ಕಾಪಾಡಬೇಕು ಎಂದು ಮತ್ತೊಮ್ಮೆ ಆಗ್ರಹಿಸಿದರು.

 

Tags:
error: Content is protected !!