ಕೊಡಗು

ಫೇಸ್‌ಬುಕ್‌ ಲೈವ್‌ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಪ್ರಕರಣ: ರೆಸಾರ್ಟ್‌ ಮಾಜಿ ಸಿಬ್ಬಂದಿ ಪ್ರವೀಣ್‌ ಪೊಲೀಸ್‌ ವಶಕ್ಕೆ

ವಿರಾಜಪೇಟೆ: ಫೇಸ್‌ಬುಕ್ ಲೈವ್‌ ಮೂಲಕ ಆತ್ಮಹತ್ಯೆ ಯತ್ನ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಜಿ ಸಿಬ್ಬಂದಿ ಪ್ರವೀಣ್‌ ಅರವಿಂದ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನನಗೆ ತುಂಬಾ ಅನ್ಯಾಯವಾಗಿದೆ. ಆದ್ದರಿಂದ ಈ ಪ್ರಪಂಚ ಬಿಟ್ಟು ಹೋಗುತ್ತಿದ್ದೇನೆ. ಹೆಂಡತಿ ಮಕ್ಕಳನ್ನು ಬಿಟ್ಟು ಹೋಗುತ್ತಿದ್ದೇನೆ. ನನಗಾದ ಅನ್ಯಾಯ ಹಾಗೂ ಟಾರ್ಚರ್ ಸಹಿಸಲಾಗುತ್ತಿಲ್ಲ ಎಂದು ಪ್ರವೀಣ್‌ ಅರವಿಂದ್‌ ಫೇಸ್‌ಬುಕ್‌ನಲ್ಲಿ ಲೈವ್‌ ವಿಡಿಯೋ ಮಾಡಿದ್ದರು.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಮೈಸೂರಿನ ಲಷ್ಕರ್‌ ಮೊಹಲ್ಲಾ ಪೊಲೀಸರು ಪ್ರವೀಣ್‌ ಲೋಕೇಶನ್‌ ಹುಡುಕಿದ್ದು, ಪ್ರವೀಣ್‌ರನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಮೈಸೂರಿನಿಂದ ವಿರಾಜಪೇಟೆಗೆ ಪ್ರವೀಣ್‌ರನ್ನು ವಿಚಾರಣೆಗೆಂದು ಕರೆತರಲಾಗುತ್ತಿದ್ದು, ವಿಚಾರಣೆ ಬಳಿಕವೇ ಹೆಚ್ಚಿನ ಸತ್ಯಾಂಶ ಹೊರಬರಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

5 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

8 mins ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

10 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

12 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

15 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

19 mins ago