ಕೊಡಗು

ಜೀವನ ಪದ್ಧತಿಯಾಗಿರುವ ಜಾನಪದದ ಉಳಿವು ಅಗತ್ಯ: ವೆಂಕಟ್ ರಾಜಾ ಅಭಿಮತ

ಮಡಿಕೇರಿ: ಜೀವನ ಪದ್ಧತಿಯಂತೆ ನಮ್ಮೊಳಗೆ ಹಾಸುಹೊಕ್ಕಾಗಿರುವ ಜಾನಪದ ಸಂಸ್ಕೃತಿ, ಕಲೆ, ಸಾಹಿತ್ಯಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಗುರುವಾರ ನಡೆದ ‘ಜಾನಪದ ವೈವಿಧ್ಯ ಕಾರ್ಯಕ್ರಮ’ದಲ್ಲಿ ದುಡಿ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಜಾನಪದ ಕಲೆ, ಸಾಹಿತ್ಯ ದಿನದಿಂದ ದಿನಕ್ಕೆ ಮರೆಯಾಗುತ್ತಿದೆ. ಈ ಬಗ್ಗೆ ಗಂಭೀರ ಚಿಂತನೆ ಅಗತ್ಯವಾಗಿದೆ. ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ಭಾರತವಾಗಿದ್ದು, ಎಲ್ಲಾ ಮಾದರಿಯ ಜಾನಪದ ಕಲೆಗಳನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಾನಪದ ಪರಿಷತ್ ಕೇವಲ ಪಟ್ಟಣಕ್ಕೆ ಮಾತ್ರ ಸೀಮಿತವಾಗದೇ ಗ್ರಾಮೀಣ ಭಾಗದಲ್ಲೂ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ. ಜಾನಪದ ಉತ್ಸವಗಳು ಹೆಚ್ಚು ಹೆಚ್ಚು ನಡೆಯಬೇಕು. ಜಾನಪದ ಪರಿಷತ್ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದರು.

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಪ್ರಸನ್ನ ಮಾತನಾಡಿ, ಜಾನಪದ ಜೀವನ ಪದ್ಧತಿ ಮನಸ್ಸನ್ನು ಪುಳಕಿತಗೊಳಿಸುತ್ತದೆ. ಜಾನಪದ ಅಗಾಧವಾಗಿದೆ. ಗ್ರಂಥಗಳಲ್ಲಿ ಅದು ಉಳಿದುಕೊಂಡಿಲ್ಲ. ಬಾಯಿಂದ ಬಾಯಿಗೆ ವರ್ಗವಾಗಿರುವ ಸಾಹಿತ್ಯವನ್ನು ಉಳಿಸಿ ಬೆಳೆಸಬೇಕಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾನಪದ ಪರಿಷತ್ ನ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಜಾನಪದೀಯರಲ್ಲಿ ಯಾವುದೇ ಭೇಧ ಭಾವವಿಲ್ಲ. ಸಹಜ ಪ್ರೀತಿಯಿಂದ ಬೆಳೆದು ಬಂದವರು. ಇಂದಿನ ದಿನಮಾನದಲ್ಲಿ ಎಲ್ಲವೂ ಭಿನ್ನವಾಗಿದೆ. ಒಗ್ಗಟ್ಟು ಮರೆಯಾಗಿದೆ. ಈ ನಿಟ್ಟಿನಲ್ಲಿ ಜಾನಪದೀಯ ಮನಸ್ಸುಗಳನ್ನು ಜೋಡಿಸುವ ಕೆಲಸವನ್ನು ಪರಿಷತ್ ಮಾಡುತ್ತಿದೆ ಎಂದರು.

ಉತ್ತಮ ಹಾಗೂ ನೆಮ್ಮದಿಯ ಸಮಾಜ ನಿರ್ಮಾಣಕ್ಕೆ ಜಾನಪದ ಸಹಕಾರಿ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಜಾನಪದವನ್ನು ಮೈಗೂಡಿಸಿಕೊಳ್ಳಬೇಕು. ಯುವ ಜನಾಂಗ ತಾಂತ್ರಿಕ ಬದುಕಿನಲ್ಲಿ ಕಳೆದುಹೋಗಬಾರದು ಎಂದರು.

ಪ್ರಾಸ್ತಾವಿಕವಾಗಿ ಜಾನಪದ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಮಾತನಾಡಿ, ಕೂಡಿ ಬಾಳುವ ಸಂತೋಷವನ್ನು ಉಳಿಸಿಕೊಂಡು ಬಂದವರೇ ಜಾನಪದರು. ಜಾನಪದರು ಎಂದಿಗೂ ಪ್ರಚಾರ ಮತ್ತು ಪ್ರಸಿದ್ಧಿಗೆ ಒಳಪಟ್ಟವರಲ್ಲ. ತಾಂತ್ರಿಕತೆ ಹೆಚ್ಚಾದಂತೆ ಜಾನಪದ ಮರೆಯಾಗುತ್ತಿದೆ. ವಿದ್ಯಾರ್ಥಿಗಳು ಜಾನಪದದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಜಾನಪದ ಪರಿಷತ್‍ನ ಉಪಾಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಖಜಾಂಚಿ ಸಂಪತ್ ಕುಮಾರ್, ಕಾರ್ಯದರ್ಶಿ ಉಜ್ವಲ್ ರಂಜಿತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಾವೇರಿ ಪ್ರಕಾಶ್, ಸರ್ಕಾರಿ ಪ.ಪೂ. ಕಾಲೇಜು ಪ್ರಾಂಶುಪಾಲ ವಿಜಯ್ ಉಪಸ್ಥಿತರಿದ್ದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದಿಂದ ಸಾಂಸ್ಕೃತಿಕ ನೃತ್ಯ ನಡೆಯಿತು. ಮಡಿಕೇರಿಯ ಸಪ್ತಸ್ವರ ಕಲಾವಿದರ ಬಳಗದಿಂದ ಜಾನಪದ ಗೀತೆ ಗಾಯನ, ಶನಿವಾರಸಂತೆಯ ಜಾನಪದ ಕಲಾವಿದ ಮೊಗೇರ ಸುರೇಶ್ ಅವರಿಂದ ಜಾನಪದ ಗೀತ ಗಾಯನ, ಕಾಶಿ ಅಚ್ಚಯ್ಯ ಅವರಿಂದ ದುಡಿಪಾಟ್, ವೀರಾಜಪೇಟೆಯ ಕಲಾವಿದ ಸಾದಿಕ್ ಹಂಸ ತಂಡದ ಕುಂಚಗಾಯನ ನೆರೆದಿದ್ದವರನ್ನು ರಂಜಿಸಿತು.

ಮೊಗೇರ ಸುರೇಶ್ ಹಾಗೂ ಸಾದಿಕ್ ಹಂಸ ಇವರುಗಳನ್ನು ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ಜಾನಪದ ಪರಿಕರಗಳ ಪ್ರದರ್ಶನ ಗಮನ ಸೆಳೆಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

12 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

3 hours ago