ಕೊಡಗು

ಮಾನವ-ಪ್ರಾಣಿ ಸಂಘರ್ಷಕ್ಕೆ ವೈಜ್ಞಾನಿಕ ಕ್ರಮ ವಹಿಸಿ : ಶಾಸಕ ಮಂತರ್‌ಗೌಡ ಸಲಹೆ

ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ.

ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾನವ ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 391.832 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ ಎಂದರು.

ಆನೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಾಗೂ ಚಾಮರಾಜನಗರ ಜಿಲ್ಲೆ, ರಾಮನಗರ ಹಾಗೂ ಬೆಂಗಳೂರು ಜಿಲ್ಲೆಗಳಲ್ಲಿ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ಹಾವಳಿಯನ್ನು ತಡೆಗಟ್ಟಲು ಪ್ರತಿ ಜಿಲ್ಲೆಗೊಂದರಂತೆ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ 08 ಆನೆ ಕಾರ್ಯಪಡೆ ರಚಿಸಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ವಿವರಿಸಿದ್ದಾರೆ.

ಚಿರತೆ ಕಾರ್ಯಪಡೆಗಳ ಸ್ಥಾಪನೆ: ಸರ್ಕಾರವು ಮೈಸೂರು ವೃತ್ತದ ಮೈಸೂರು, ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ.ನರಸೀಪುರ, ಮಂಡ್ಯ, ಪಾಂಡವಪುರ ಹಾಗೂ ನಾಗಮಂಗಲ ವ್ಯಾಪ್ತಿಯಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಚಿರತೆ ಹಾವಳಿ ನಿಭಾಯಿಸುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ ವಿಭಾಗ, ಮೈಸೂರು ಇವರ ನೇತೃತ್ವದಲ್ಲಿ ಚಿರತೆ ಕಾರ್ಯಪಡೆ ರಚಿಸಲಾಗಿದೆ. ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಪುಂಡಾನೆಗಳನ್ನು ಗುರುತಿಸಿ, ಸೆರೆಹಿಡಿದು ಆಗ್ಲಿಂದಾಗ್ಗೆ ಆನೆ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಾಹಿತಿ ನಿಡಿದ್ದಾರೆ.

ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈಗಾಗಲೇ ರಚಿಸಿರುವ ] ಇಟಿಎಫ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ತಂಡಗಳನ್ನು ಒಟ್ಟುಗೂಡಿಸಿ ಮಾನವ ವನ್ಯಜೀವಿ ಸಂಘರ್ಷ ಉಪ ತಂಡಗಳಾಗಿ ರಚಿಸಿ ಆಯ್ತ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಶಾಸಕರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

9 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

9 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

15 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

15 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

16 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

16 hours ago