ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.
ತಮಿಳುನಾಡು ರಾಜ್ಯದ ನಿವಾಸಿ ಪ್ರಸ್ತುತ ಬೆಂಗಳೂರು ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಸುದರ್ಶನ್ (22) ಎಂಬಾತನೇ ಮೃತ ದುರ್ದೈವಿಯಾಗಿದ್ದಾನೆ.
ಕಾಲೇಜಿನ ತಂಡ ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದು, ಇಂದು ಬೆಳಿಗ್ಗೆ ಹೇರೂರಿನಲ್ಲಿ ಹಾರಂಗಿ ಜಲಾಶಯದ ಹಿನ್ನೀರಿನ ವೀಕ್ಷಣೆಗೆ ತೆರಳಿತ್ತು.
ಈ ತಂಡದ ಪೈಕಿ ಸುದರ್ಶನ್ ನೀರಿಗೆ ಇಳಿದಿದ್ದಾನೆ. ನಂತರ ಮೇಲಕ್ಕೆ ಬರಲಾಗದೆ ಸಾವಿಗೀಡಾಗಿದ್ದಾನೆ. ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳೀಯ ಮುಳುಗು ತಜ್ಞರು ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…