ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದರಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಬಳಿ ನಡೆದಿದೆ.
ಮಂಗಳೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ಮದೆನಾಡು ಸಮೀಪಿಸುತ್ತಿದ್ದಂತೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಕ್ಷಣಮಾತ್ರದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, ಕಾರಿನ ಎಂಜಿನ್ ಸ್ಥಗಿತಗೊಳಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೆದ್ದಾರಿ ಬದಿಯಲ್ಲೇ ದಟ್ಟವಾದ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.





