ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ೧೦ ಸಾವಿರ ಕ್ಯೂಸೆಕ್ ಗೆ ಏರಿಕೆಯಾಗಿದೆ. ಕ್ಷಣ ಕ್ಷಣಕ್ಕೂ ಒಳಹರಿವು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ರಾಥ್ರಿ ೧೨ ಗಂಟೆ ಸುಮಾರಿಗೆ ಜಲಾಶಯದಿಂದ ೧೦ ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದೆ. ಇದರಿಂದಾಗಿ ಕಾವೇರಿ ಮತ್ತು ಹಾರಂಗಿ ನದಿ ದಂಡೆಯಲ್ಲಿ ಪ್ರವಾಹದ ಭೀತಿ ಸೃಷ್ಠಿಯಾಗಿದೆ.
ಇನ್ನು ತಾಲೂಕಿನ ಭಾಗಮಂಡಲದಲ್ಲೂ ರಾತ್ರಿಯಿಂದ ಉತ್ತಮ ಮಳೆಯಾಗುತ್ತಿರುವ ಕಾರಣ ತ್ರಿವೇಣಿ ಸಂಗಮದಲ್ಲಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದೇ ರೀತಿ ಮಳೆ ಏನಾದ್ರೂ ಮುಂದುವರೆದರೆ ಮಡಿಕೇರಿ ನಾಪೋಕ್ಲು ರಸ್ತೆ ಕಡಿತಗೊಳ್ಳುವ ಸಾಧ್ಯತೆ ಇದೆ.
ಅಲ್ಲದೆ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಒಂದಲ್ಲ ಒಂದು ಅವಾಂತರಗಳು ಸೃಷ್ಠಿಯಾಗಿವೆ. ವಿಪರೀತ ಗಾಳಿ ಮಳೆಯಿಂದಾಗಿ ಹಲವಾರು ಗ್ರಾಮದಲ್ಲಿ ವಿದ್ಯುತ್ ಕಂಬ ಹಾಗೂ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ. ಕೆಲ ಗ್ರಾಮಗಳಲ್ಲಿ ಕರೆಂಟ್ ಇಲ್ಲದೆ ಕಗತ್ತಲಲ್ಲೆ ದಿನ ಕಳೆಯುತ್ತಿದ್ದಾರೆ.
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…
ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ…