ಕೊಡಗು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆಗೆ ಕಾರಣರಾದ ಶಾಸಕರ ವಿರುದ್ಧ ಎಫ್‌ಐಆರ್ ದಾಖಲಿಸುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ವಿನಯ್ ಮೃತದೇಹ ಕುಶಾಲನಗರದ ಆರೋಗ್ಯ ಸಮುದಾಯ ಕೇಂದ್ರಕ್ಕೆ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೃತದೇಹದ ಅಂತಿಮ ದರ್ಶನ ಪಡೆದರು.
ಬಳಿಕ ಮಾತನಾಡಿದ ವಿಜಯೇಂದ್ರ ಅವರು, ಸ್ಥಳೀಯ ಶಾಸಕರ ವೈಫಲ್ಯ ಎತ್ತಿ ಹಿಡಿದಿದ್ದೇ ತಪ್ಪಾ..?.ಆ ಕಾರಣಕ್ಕೆ ಕೇಸು ಹಾಕಿಸಿ ಹಿಂಸೆ ನೀಡಲಾಗಿದೆ. ಹೈಕೋರ್ಟ್‌ನಲ್ಲಿ ಬೇಲ್ ಆದ್ರೂ ಮನೆಗೆ ಪೊಲೀಸರನ್ನು ಯಾಕೆ ಕಳುಹಿಸಿದ್ದಾರೆ. ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಉಲ್ಲೇಖಿಸದಿರುವುದು ಅಕ್ಷಮ್ಯ ಅಪರಾಧ. ಪೊನ್ನಣ್ಣ ಸಿಎಂ ಕಾನೂನು ಸಲಹೆಗಾರರು, ಮಂತರ್ ಗೌಡ ಪ್ರಭಾವಿ ಶಾಸಕರಿದ್ದಾರೆ.
ಇಬ್ಬರು ಶಾಸಕರ ದಬ್ಬಾಳಿಕೆಯಿಂದ ನಮ್ಮ ಕಾರ್ಯಕರ್ತನ ಆತ್ಮಹತ್ಯೆ ಆಗಿದೆ. ಈ ಪ್ರಕರಣವನ್ನು ಅಷ್ಟು ಸುಲಭವಾಗಿ ನಾವು ಬಿಡುವುದಿಲ್ಲ. ರಾಜ್ಯದಲ್ಲಿ ಪೊಲೀಸ್ ಸ್ಟೇಷನ್ ಕಾಂಗ್ರೆಸ್ ಆಫೀಸ್ ತರ ಕೆಲಸ ಮಾಡ್ತಿದೆ. ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸಲ್ಲ. ಬೆಂಗಳೂರಿನ ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಬಿಟ್ಟಿದ್ದಾರೆ. ಇದನ್ನ ಗೃಹ ಸಚಿವರು ಗಮನಿಸಬೇಕು. ಮುಂದೆ ಏನಾದರೂ ಹೆಚ್ಚು ಕಡಿಮೆ ಆದರೆ ನಾವು ಜವಾಬ್ದಾರರಲ್ಲ. ಈ ಘಟನೆಯನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಹಿಂದೆ ಆತ್ಮಹತ್ಯೆ ಪ್ರಕರಣಗಳು ಏನಾಗಿದೆ ಅನ್ನೋದು ರಾಜ್ಯದ ಜನರ ಗಮನದಲ್ಲಿದೆ.
ಕಾಂಗ್ರೆಸ್ ರಾಜ್ಯದಲ್ಲಿ ತುಘಲಕ್ ಸರ್ಕಾರ ನಡೆಸುತ್ತಿದೆ. ಇದನ್ನು ನೋಡಿ ಕಣ್ಣುಮುಚ್ಚಿ ಕೂರುವ ಪ್ರಶ್ನೆಯೇ ಇಲ್ಲ. ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಉಲ್ಲೇಖವಾಗುವವರೆಗೆ ಅಂತ್ಯಸಂಸ್ಕಾರ ಮಾಡಲ್ಲ. ಅರ್ಧ ಗಂಟೆ ಶಾಂತಿಯುತವಾಗಿ ಕಾಯುತ್ತೇವೆ ಎಂದು ಪೊಲೀಸರಿಗೆ ಒಂದು ಗಂಟೆಗಳ ಗಡುವು ನೀಡಿದರು.
ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…
ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…