ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಸಿಎಂ ಅವರೇ ಹಣ ಸಂಗ್ರಹಿಸಿ ಮಹಾರಾಷ್ಟ್ರ ಚುನಾವಣೆ ಹಣ ಕಳುಹಿಸಿದ್ದಾರೆ. ಇನ್ಮುಂದೆ ಅಸ್ಸಾಂ ಚುನಾವಣೆಗೆ ಕಳುಹಿಸಲಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ. ಆರ್ ಅಶೋಕ್ ಅವರಿಗೆ ಆಗಲಿ, ವಿಜಯೇಂದ್ರ ಅವರಿಗೆ ಮೆಚ್ಯುರಿಟಿ ಇಲ್ಲ. ರಾಜಕಾರಣಿಗಳು ಏನಾದರೂ ಮಾತನಾಡಿದರು ಎಂದರೆ ಅದಕ್ಕೆ ಒಂದು ಘನತೆ ಇರಬೇಕು ಎಂದು ಆರ್.ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅವರಿಗೆ ತಮ್ಮ ಪಕ್ಷದಲ್ಲಿ ಏನು ಆಗುತ್ತದೆ ಎನ್ನುವುದು ಗೊತ್ತಿಲ್ಲ ಅವರ ಪಕ್ಷ ದಲ್ಲಿರುವ ಹುಳುಕುಗಳನ್ನು ಸರಿಮಾಡಿಕೊಳ್ಳಲು ಆಗಲ್ಲ. ಶ್ರೀರಾಮುಲು, ರೆಡ್ಡಿ ಪಾದಯಾತ್ರೆ ಮಾಡುತ್ತೇವೆ ಅಂತಾರೆ. ಆದರೆ ಇವರು ಅದಕ್ಕೆ ಹೈಕಮಾಂಡ್ ಒಪ್ಪಿಗೆ ಬೇಕು ಅಂತಾರೆ. ಹೀಗಿರುವಾಗ ನಮ್ಮ ಪಕ್ಷದ ಬಗ್ಗೆ ಏನು ಮಾತನಾಡುವುದು. ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಅನುದಾನದ ಬಗ್ಗೆ ಒಬ್ಬ ಕೇಂದ್ರ ಸಚಿವನೂ ಮಾತನಾಡಲ್ಲ. ಜೋಳ, ಕಬ್ಬು ಅವುಗಳ ಎಂಎಸ್ ಪಿ ಬಗ್ಗೆ ಮಾತನಾಡಲ್ಲ. ಅದು ಬಿಟ್ಟು ಬೆಳಿಗ್ಗೆಯಿಂದ ಸಂಜೆವರೆಗೆ ನಮ್ಮ ಸರ್ಕಾರದ ವಿರುದ್ಧ ಬೊಗಳುತ್ತಾರೆ. ಅವರಿಗೆ ತಾಕತ್ತಿದ್ದರೆ ಕೇಂದ್ರದಿಂದ ಬರಬೇಕಾಗಿರುವ ಅನುದಾನ ಕೊಡಿಸಲಿ ಎಂದು ಸವಾಲು ಹಾಕಿದರು.
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…